ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಕೊರೊನಾ ಕೊಂಚ ಇಳಿಕೆ: ಇಂದು 1,350 ಜನರಿಗೆ ಸೋಂಕು ದೃಢ

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ನಿಧಾನವಾಗಿ ಏರಿಕೆಯಾಗುತ್ತಿದೆ. ಆದರೆ ನಿನ್ನೆಗಿಂತ (1,453 ಕೊರೊನಾ ಕೇಸ್‌) ಇಂದು ಕಡಿಮೆ (1,350 ಜನರಿಗೆ) ಸೋಂಕು ದೃಢಪಟ್ಟಿದೆ.

ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಈವರೆಗೂ 29,37,427 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.85ಕ್ಕೆ ಕುಸಿದಿದೆ. ಇಂದು 1,57,509 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 1,648 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 28,79,433 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 18 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,123ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 20,845 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.33%ನಷ್ಟಿದೆ.

ಬೆಂಗಳೂರು: ನಗರದಲ್ಲಿ ಇಂದು 260 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,34,769ಕ್ಕೆ ಏರಿಕೆಯಾಗಿದೆ 374 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,11,014 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಒಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 15,957 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,797 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
PublicNext

PublicNext

21/08/2021 06:26 pm

Cinque Terre

169.99 K

Cinque Terre

1

ಸಂಬಂಧಿತ ಸುದ್ದಿ