ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದು 1,189 ಜನರಿಗೆ ಕೊರೊನಾ- 22 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮತ್ತೆ ನಿಧಾನವಾಗಿ ಇಳಿಕೆ ಕಾಣುತ್ತಿದೆ. ಆಗಸ್ಟ್ 20ರಂದು 1,453 ಕೊರೊನಾ ಕೇಸ್‌ಗಳು ಪತ್ತೆಯಾಗಿದ್ದವು. ಆದರೆ ನಿನ್ನೆ 1,350 ಜನರಿಗೆ ಕೊರೊನಾ ದೃಢಪಟ್ಟಿದ್ದರೆ. ಇಂದು ಕೂಡ ಸೋಂಕಿತರ ಸಂಖ್ಯೆ ಇಳಿಕೆ ಕಂಡಿದೆ.

ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 1,189 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,38,616 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.94ಕ್ಕೆ ಕುಸಿದಿದೆ. ಇಂದು 1,25,158 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 1,456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 28,80,889 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 22 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,145ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 20,556 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.85%ನಷ್ಟಿದೆ.

ಬೆಂಗಳೂರು: ನಗರದಲ್ಲಿ ಇಂದು 267 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,35,036ಕ್ಕೆ ಏರಿಕೆಯಾಗಿದೆ 300 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,11,314ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಇಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 15,959 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,762 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
PublicNext

PublicNext

22/08/2021 06:25 pm

Cinque Terre

40.45 K

Cinque Terre

0