ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಮತ್ತೆ ಹೆಚ್ಚಾಗುವ ಲಕ್ಷಣ ಕಂಡು ಬರುತ್ತಿವೆ. ಕಳೆದ 24 ಗಂಟೆಯಲ್ಲಿ1,151 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 10 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 29,39,767 ಜನರಿಗೆ ಸೋಂಕು ತಗುಲಿದ್ದು, 37,155 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,442 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,82,331 ಕ್ಕೆ ಏರಿಕೆಯಾಗಿದೆ. ಇನ್ನು 20,255 ಸಕ್ರಿಯ ಪ್ರಕರಣಗಳಿವೆ. ಇದರೊಂದಿಗೆ ಕೋವಿಡ್ ಸಕಾರಾತ್ಮಕತೆ ದರ 1.08%ನಷ್ಟಿದೆ. ಹಾಗೂ ಮರಣ ಪ್ರಮಾಣ 0.86%ನಷ್ಟಿದೆ. 1,06,364 ಜನರನ್ನು ಕಳೆದ 24 ಗಂಟೆಗಳಲ್ಲಿ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 270 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,35,306ಕ್ಕೆ ಏರಿಕೆಯಾಗಿದೆ. 363 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,11,677 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವೆರಗೂ ಒಟ್ಟು 15,959 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ,7669 ಸಕ್ರಿಯ ಪ್ರಕರಣಗಳಿವೆ.
PublicNext
23/08/2021 06:56 pm