ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಮತ್ತೆ ಭುಗಿಲೇಳುವ ಕಳೆದ 24 ಗಂಟೆಯಲ್ಲಿ 1,259 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ 29 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 2941026 ಜನರಿಗೆ ಸೋಂಕು ತಗುಲಿದ್ದು, 37184 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1701 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2884032 ಕ್ಕೆ ಏರಿಕೆಯಾಗಿದೆ. ಇನ್ನು 19784 ಸಕ್ರಿಯ ಪ್ರಕರಣಗಳಿವೆ. ಇನ್ನು ಕೋವಿಡ್ ಸಕಾರಾತ್ಮಕತೆಯ ಪ್ರಮಾಣ 0.65% ನಷ್ಟಿದೆ. ಹಾಗೂ ಮರಣ ಪ್ರಮಾಣ 2.30%ನಷ್ಟಿದೆ. ಹಾಗೂ ಕಳೆದ 24 ಗಂಟೆಗಳಲ್ಲಿ 190915 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ವೈರಸ್ ಮತ್ತೊಮ್ಮೆ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸುವಂತೆ ಕಾಣುತ್ತಿದೆ. ಇಂದು ಮಹಾನಗರದಲ್ಲಿ 295 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1235601 ಕ್ಕೆ ಏರಿಕೆಯಾಗಿದೆ. 371 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1212048ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 11 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15970 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7582 ಸಕ್ರಿಯ ಪ್ರಕರಣಗಳಿವೆ.
PublicNext
24/08/2021 07:12 pm