ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಘ್ಫಾನ್‌ನಿಂದ ದೆಹಲಿಗೆ ಬಂದ 78 ಭಾರತೀಯರಲ್ಲಿ 16 ಜನರಿಗೆ ಕೊರೊನಾ ದೃಢ

ನವದೆಹಲಿ: ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದುಕೊಂಡ ಬಳಿಕ ಅಲ್ಲಿನ ಪರಿಸ್ಥಿತಿ ಆತಂಕಕ್ಕೆ ಕಾರಣವಾಗಿದೆ. ಅಲ್ಲಿದ್ದ ಭಾರತೀಯರ ರಕ್ಷಣಾ ಕಾರ್ಯ ಆರಂಭವಾಗಿದೆ. 78 ಭಾರತೀಯರನ್ನು ರಕ್ಷಣೆ ಮಾಡಲಾಗಿದ್ದು, ಎಲ್ಲರೂ ಮಂಗಳವಾರ ನವದೆಹಲಿ ತಲುಪಿದ್ದರು. ಎಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, 16 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ 78 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಇಲ್ಲಿಯ ತನಕ 228 ಭಾರತೀಯರು ಸೇರಿದಂತೆ 626 ಜನರನ್ನು ಅಫ್ಘಾನಿಸ್ತಾನದಿಂದ ರಕ್ಷಣೆ ಮಾಡಲಾಗಿದೆ. 228 ಜನರಲ್ಲಿ ಅಲ್ಲಿನ ರಾಯಭಾರಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನು ಸೇರಿಸಿಲ್ಲ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

Edited By : Vijay Kumar
PublicNext

PublicNext

25/08/2021 09:11 am

Cinque Terre

23.52 K

Cinque Terre

1