ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದಲ್ಲಿ ಇಂದು 37,593 ಮಂದಿಗೆ ಕೊರೊನಾ ದೃಢ- 648 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ನಿಧಾನವಾಗಿ ಇಳಿಕೆ ಕಾಣುತ್ತಿದೆ. ದೇಶದಾದ್ಯಂತ 24 ಗಂಟೆಗಳಲ್ಲಿ 37,593 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 648 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, ದೇಶದಲ್ಲಿ ಸೋಂಕಿತರ ಸಂಖ್ಯೆ 3,25,12,366ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಇದುವರೆಗೆ 3,17,54,281 ಮಂದಿ ಚೇತರಿಸಿಕೊಂಡಿದ್ದಾರೆ. 4,35,758 ಮಂದಿ ಸಾವಿಗೀಡಾಗಿದ್ದು, ಸದ್ಯ 3,22,327 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಈವರೆಗೆ 59,55,04,593 ಡೋಸ್ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Edited By : Vijay Kumar
PublicNext

PublicNext

25/08/2021 10:31 am

Cinque Terre

31.85 K

Cinque Terre

1

ಸಂಬಂಧಿತ ಸುದ್ದಿ