ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶಾದ್ಯಂತ ಕಳೆದ ಒಂದು ದಿನದಲ್ಲಿ 37,593 ಕೊರೊನಾ ಪಾಸಿಟಿವ್

ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಇಂದು ದೇಶದಲ್ಲಿ 24 ಗಂಟೆಗಳಲ್ಲಿ 37,593 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಕೊರೋನಾದಿಂದಾಗಿ 648 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಇನ್ನು ದೇಶದಲ್ಲಿ ಕೊರೋನಾ ಪ್ರಕರಣಗಳ ಒಟ್ಟು ಸಂಖ್ಯೆ 3,25,12,366ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,35,758ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,22,327ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 34,169 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,17,54,281ಕ್ಕೆ ತಲುಪಿದೆ.

Edited By : Nagaraj Tulugeri
PublicNext

PublicNext

25/08/2021 12:46 pm

Cinque Terre

25.27 K

Cinque Terre

1