ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ಇನ್ನೂ ನಿಂತಿಲ್ಲ. ಕಳೆದ 24 ಗಂಟೆಯಲ್ಲಿ 1,213 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 25 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,43,463 ಜನರಿಗೆ ಸೋಂಕು ತಗುಲಿದ್ದು 37,231 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,206 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,86,906 ಕ್ಕೆ ಏರಿಕೆಯಾಗಿದೆ. ಇನ್ನು 19,300 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ 0.64%ನಷ್ಟು ಕೋವಿಡ್ ಸಕಾರಾತ್ಮಕತೆ ದರ ಇದೆ. 2.06%ನಷ್ಟು ಮರಣ ಪ್ರಮಾಣ ಇದೆ. ರಾಜ್ಯದಾದ್ಯಂತ ಒಟ್ಟು 1,87,187 ಜನರನ್ನು ಕೋವಿಟ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಆರ್ಭಟ ಮತ್ತೆ ಶುರುವಾಗುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ಇಂದು 319 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,36,229 ಕ್ಕೆ ಏರಿಕೆಯಾಗಿದೆ. 205 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,12,910 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,975 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,343 ಸಕ್ರಿಯ ಪ್ರಕರಣಗಳಿವೆ.
PublicNext
26/08/2021 07:08 pm