ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ ಕೊರೊನಾ ಅಪ್ಡೇಟ್ಸ್: ಇಂದು 1,301 ಜನರಿಗೆ ಸೋಂಕು, 1.30%ನಷ್ಟು ಮರಣ ಪ್ರಮಾಣ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಅಬ್ಬರ ಜೋರಾಗಿದ್ದು,ಕಳೆದ 24 ಗಂಟೆಯಲ್ಲಿ 1,301 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 17 ಜನ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,44,764 ಜನರಿಗೆ ಸೋಂಕು ತಗುಲಿದ್ದು 37,248 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,614 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,88,520 ಕ್ಕೆ ಏರಿಕೆಯಾಗಿದೆ. ಇನ್ನು 18,970 ಸಕ್ರಿಯ ಪ್ರಕರಣಗಳಿವೆ. ಹಾಗೂ ರಾಜ್ಯದಾದ್ಯಂತ ಕೋವಿಡ್ ಪಾಸಿಟಿವಿಟಿ ಪ್ರಮಾಣ 0.69%ನಷ್ಟಿದೆ. ಹಾಗೂ ಮರಣ ಪ್ರಮಾಣ 1.30%ನಷ್ಟಿದೆ. ಇನ್ನು ರಾಜ್ಯಾದ್ಯಂತ 1,86,900 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಭೀತಿ ಶುರುವಾಗಿದೆ. ಇಂದು 386 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,36,615ಕ್ಕೆ ಏರಿಕೆಯಾಗಿದೆ. 386 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,13,296ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,977 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,341ಸಕ್ರಿಯ ಪ್ರಕರಣಗಳಿವೆ.

Edited By : Nagaraj Tulugeri
PublicNext

PublicNext

27/08/2021 06:47 pm

Cinque Terre

35.26 K

Cinque Terre

0