ನವದೆಹಲಿ: ದೇಶದಲ್ಲಿ ಹೆಮ್ಮಾರಿ ಹಾವಳಿ ಮತ್ತೆ ಹೆಚ್ಚಾಗಿದೆ ಕಳೆದ 24 ಗಂಟೆಯಲ್ಲಿ 46,759 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 509 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3,26,49,947ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,37,370ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,59,775ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 31,374 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,18,52,802ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 17,61,110 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಒಟ್ಟು 51,68,87,602 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 62,29,89,134 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
PublicNext
28/08/2021 10:10 am