ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಾದ್ಯಂತ ಇಂದು 1,229 ಜನರಿಗೆ ಸೋಂಕು: ಮರಣ ಪ್ರಮಾಣ 1.05%

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ತನ್ನ ಇರುವಿಕೆಯನ್ನು ಖಚಿತ ಪಡಿಸುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 1,229 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 13 ಜನ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,45,993 ಜನರಿಗೆ ಸೋಂಕು ತಗುಲಿದ್ದು 37,261 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,289 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,89,809ಕ್ಕೆ ಏರಿಕೆಯಾಗಿದೆ. ಇನ್ನು 18,897 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೋವಿಡ್ ಖಚಿತತೆಯ ಪ್ರಮಾಣ 0.66% ನಷ್ಟಿದೆ. ಇನ್ನು ಮರಣ ಪ್ರಮಾಣ 1.05% ನಷ್ಟಿದೆ. 1,83,642 ಜನರನ್ನು ಕೋವಿಡ್ ಪರೀಕ್ಷೆಗೆ ಒಳಡಿಸಲಾಗಿತ್ತು.

ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು ಇಂದು 310 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,36,925 ಕ್ಕೆ ಏರಿಕೆಯಾಗಿದೆ. 329 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,13,625 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಕೊರೊನಾದಿಂದ ಸಾವು ಸಂಭವಿಸಿಲ್ಲ. ಈವೆರಗೂ ಒಟ್ಟು 15,977 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,322 ಸಕ್ರಿಯ ಪ್ರಕರಣಗಳಿವೆ.

Edited By : Nagaraj Tulugeri
PublicNext

PublicNext

28/08/2021 07:17 pm

Cinque Terre

33.51 K

Cinque Terre

0