ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂದುವರೆದ ಕೊರೊನಾ ಏರಿಳಿತ : ರಾಜ್ಯದಲ್ಲಿಂದು 1262 ಜನರಲ್ಲಿ ಸೋಂಕು ಪತ್ತೆ

ಬೆಂಗಳೂರು : ರಾಜ್ಯದಲ್ಲಿಂದು 1262 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2947255 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 178664 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ 0.70 %ಕ್ಕೆ ಕುಸಿದಿದೆ.

ರಾಜ್ಯದಲ್ಲಿ ಇಂದು 1384 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2891193 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 17 ಜನ ಬಲಿಯಾಗಿದ್ದು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37278 ಕ್ಕೆ ಏರಿಕೆಯಾಗಿದೆ. 18758 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.34 % ನಷ್ಟಿದೆ.

ಬೆಂಗಳೂರು: ನಗರದಲ್ಲಿ 361 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1237286 ಕ್ಕೆ ಏರಿಕೆಯಾಗಿದೆ 334 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1213959 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 6 ಜನ ಸಾವನ್ನಪ್ಪಿದ್ದು ಈವೆರಗೂ ಒಟ್ಟು 15983 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7343 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
PublicNext

PublicNext

29/08/2021 07:02 pm

Cinque Terre

33.46 K

Cinque Terre

4