ನವದೆಹಲಿ: ಹೆಮ್ಮಾರಿ ಕೊರೊನಾದಿಂದ ಕಳೆದ 24 ಗಂಟೆಯಲ್ಲಿ 380 ಜನ ಸಾವನ್ನಪ್ಪಿದ್ದಾರೆ. ಇದೇ ವೇಳೆ 42,909 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಕೋವಿಡ್ ಮೂರನೇ ಅಲೆಯ ಭೀತಿಯ ನಡುವೆಯೇ ಇಂದು ದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಅಲ್ಪ ಏರಿಕೆಯಾಗಿದೆ. ದೇಶದಲ್ಲಿ ಪತ್ತೆಯಾದ ದೈನಂದಿನ ಪ್ರಕರಣಗಳ ಪೈಕಿ ಶೇ.50ಕ್ಕೂ ಹೆಚ್ಚು ಪ್ರಕರಣಗಳು ಕೇರಳದಲ್ಲಿ ವರದಿಯಾಗಿದ್ದು, ಗರಿಷ್ಠ ಅಂದರೆ 29,836 ಸೋಂಕು ಪ್ರಕರಣಗಳ ಪತ್ತೆಯಾಗಿದೆ.
ಅಂತೆಯೇ ಇದೇ ಅವಧಿಯಲ್ಲಿ 34,763 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಗುಣಮುಖರ ಸಂಖ್ಯೆ 3,19,23,405 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 380 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 4,38,210ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,76,324 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ 52.01 ಕೋಟಿ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, 63.43 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
PublicNext
30/08/2021 12:15 pm