ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾರಕ್ಕೊಮ್ಮೆ ಲಸಿಕೆ ಉತ್ಸವ : ದಿನಕ್ಕೆ 5 ಲಕ್ಷ ಕೋವಿಡ್ ಲಸಿಕೆ!

ಬೆಂಗಳೂರು: ಹೆಮ್ಮಾರಿ ಸೋಂಕು ಕೊರೊನಾ ಹತೋಟಿಗೆ ಅಸ್ತ್ರವಾಗಿರುವ ಕೊರೊಲಾ ಲಸಿಕೆ ಅಭಿಯಾನ ಮುಂದುವರೆದಿದೆ. ಸದ್ಯ ಕೇಂದ್ರ ಸರ್ಕಾರ ಮಾತು ಕೊಟ್ಟಂತೆ ಆಗಸ್ಟ್ ತಿಂಗಳಲ್ಲಿ ಕರ್ನಾಟಕಕ್ಕೆ 1 ಕೋಟಿ 10 ಲಕ್ಷ ಡೋಸ್ ಲಸಿಕೆ ನೀಡಿದೆ. ಇನ್ನು ಮುಂದೆ ಪ್ರತಿದಿನ 5 ಲಕ್ಷ ಲಸಿಕೆ ನೀಡಲು ತೀರ್ಮಾನಿಸಿದ್ದೇವೆ. ಜೊತೆಗೆ, ಪ್ರತಿ ಗುರುವಾರ ಲಸಿಕೆ ಉತ್ಸವ ಮಾಡಲು ನಿರ್ಧರಿಸಿದ್ದು, ಈ ದಿನ 10 ಲಕ್ಷ ಲಸಿಕೆ ನೀಡಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಲಸಿಕೆ ಬಗ್ಗೆ ನಡೆದ ವಿಶೇಷ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿದ ಸುಧಾಕರ್, ರಾಜ್ಯದಲ್ಲಿ ಈವರೆಗೆ ಸುಮಾರು 5 ಕೋಟಿ ಕೊರೊನಾ ಲಸಿಕೆ ಡೋಸ್ ಗಳನ್ನು ನೀಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಇಲ್ಲಿಯವರೆಗೂ 1 ಕೋಟಿ ಲಸಿಕೆ ನೀಡಿ ಆಗಿದೆ. ಇಡೀ ರಾಜ್ಯದಲ್ಲಿ 4 ಕೋಟಿ ಲಸಿಕೆ ಆಗಿದೆ. ಇಡೀ ರಾಜ್ಯದಲ್ಲಿ ಶೇಕಡ 20 ರಷ್ಟು ಎರಡನೇ ಡೋಸ್ ಕೊಡಲಾಗಿದೆ. ಬೆಂಗಳೂರಿನಲ್ಲಿ ಶೇಕಡ 27 ರಷ್ಟು ಎರಡನೇ ಡೋಸ್ ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಲಸಿಕೆ ನೀಡುವುದು ಹಿನ್ನಡೆಯಾಗಿದ್ದು ಆ ಕಡೆ ಹೆಚ್ಚು ಗಮನ ಹರಿಸಲಾಗುವುದು ಎಂದರು.

Edited By : Nirmala Aralikatti
PublicNext

PublicNext

30/08/2021 01:57 pm

Cinque Terre

25.79 K

Cinque Terre

1