ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರದಿಂದ ಕಳೆದ ಕೆಲ ದಿನಗಳಿಂದ ಸಾವಿರದ ಗಡಿ ದಾಟಿದ್ದ ಸೋಂಕಿತರ ಸಂಖ್ಯೆ ಇಂದು ಭಾರಿ ಇಳಿಕೆ ಕಂಡಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 973 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,48,228 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.64ಕ್ಕೆ ಕುಸಿದಿದೆ. ಇಂದು 1,51,219 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,324 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 28,92,517 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 15 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,293ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 18,392 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.54%ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 264 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,37,550ಕ್ಕೆ ಏರಿಕೆಯಾಗಿದೆ 261 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,14,220ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಮೂವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 15,986 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,343 ಸಕ್ರಿಯ ಪ್ರಕರಣಗಳಿವೆ.
PublicNext
30/08/2021 07:23 pm