ಬೆಂಗಳೂರು: ರಾಜ್ಯದಲ್ಲಿ ನಿನ್ನೆ (ಸೋಮವಾರ) 973 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಇಂದು ಮತ್ತೆ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 1,217 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,49,445 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.94ಕ್ಕೆ ಕುಸಿದಿದೆ. ಇಂದು 1,28,657 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,198 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 28,93,715 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 25 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,318ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 18,386 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.05ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 287 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,37,837ಕ್ಕೆ ಏರಿಕೆಯಾಗಿದೆ 185 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,14,405ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 7 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 15,993 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,438 ಸಕ್ರಿಯ ಪ್ರಕರಣಗಳಿವೆ.
PublicNext
31/08/2021 07:12 pm