ನವದೆಹಲಿ : ಹೆಮ್ಮಾರಿ ಸೋಂಕು ಆಟ ಮುಂದುವರೆದಿದೆ. ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 41,965 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 460 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24ಗಂಟೆಗಳಲ್ಲಿ 33,964 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಟ್ಟು 3,28,10,845ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,78,181ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಈವರೆಗೆ ಒಟ್ಟು 3,19,93,644 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,39,020ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ 30,941 ಮಂದಿಯನ್ನು ಪರೀಕ್ಷಿಸಿದ್ದ ವೇಳೆ ಕೋವಿಡ್ ಪಾಸಿಟಿವ್ ಪತ್ತೆಯಾಗಿತ್ತು. ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 3,27,68,880ಕ್ಕೆ ಹೆಚ್ಚಳವಾಗಿದೆ.
ಜನವರಿ 16ರಿಂದ ಕೋವಿಡ್ ಲಸಿಕೆಯ ಮೆಗಾ ಅಭಿಯಾನ ಆರಂಭವಾದ ನಂತರ ಇದುವರೆಗೆ ಒಂದು ಕೋಟಿಗೂ ಅಧಿಕ ಲಸಿಕೆಯನ್ನು ನೀಡಲಾಗಿದೆ ಎಂದು ವರದಿ ತಿಳಿಸಿದೆ.
PublicNext
01/09/2021 12:19 pm