ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆ (ಮಂಗಳವಾರ)ಕ್ಕಿಂತ ಕೊಂಚ ಇಳಿಕೆ ಕಂಡಿದೆ. ನಿನ್ನೆ 1,217 ಕೊರೊನಾ ಕೇಸ್ಗಳು ಪತ್ತೆಯಾಗಿದ್ದವು.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 1,159 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,50,604 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.66ಕ್ಕೆ ಕುಸಿದಿದೆ. ಇಂದು 1,75,319 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,112 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 28,94,827 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 21 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,339ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 18,412 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.81ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 359 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,38,196ಕ್ಕೆ ಏರಿಕೆಯಾಗಿದೆ 232 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,14,637ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 7 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,000 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,558 ಸಕ್ರಿಯ ಪ್ರಕರಣಗಳಿವೆ.
PublicNext
01/09/2021 06:24 pm