ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ 1,240 ಮಂದಿಗೆ ಕೊರೊನಾ ದೃಢ- 22 ಜನ ಬಲಿ: ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಇಂದು 1,240 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಕೆ.ಸುಧಾಕರ್, "ಬೆಂಗಳೂರಿನಲ್ಲಿ ಇಂದು 319 ಜನರಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.74ಕ್ಕೆ ಕುಸಿದಿದೆ. ಇಂದು ಬೆಂಗಳೂರಿನ 264 ಜನರು ಸೇರಿ ರಾಜ್ಯದಲ್ಲಿ 1,252 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ" ಎಂದು ತಿಳಿಸಿದ್ದಾರೆ.

ಇದೇ ಸಮಯದಲ್ಲಿ ಬೆಂಗಳೂರಿನ ನಾಲ್ವರು ಸೇರಿ ರಾಜ್ಯದ 22 ಜನರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 18,378 ಸಕ್ರಿಯ ಪ್ರಕರಣಗಳಿವೆ ಹಾಗೂ ಇಂದು 1,65,386 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Edited By : Vijay Kumar
PublicNext

PublicNext

02/09/2021 06:32 pm

Cinque Terre

34.11 K

Cinque Terre

1

ಸಂಬಂಧಿತ ಸುದ್ದಿ