ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ. ಜೊತೆಗೆ ಸಾವಿನ ಸಂಖ್ಯೆಯಲ್ಲೂ ಕೊಂಚ ಏರಿಕೆ ಕಂಡಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 1,240 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,51,844 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.74ಕ್ಕೆ ಕುಸಿದಿದೆ. ಇಂದು 1,65,386 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,252 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 28,96,079 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 22 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,361ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 18,378 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.77ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 319 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,38,515ಕ್ಕೆ ಏರಿಕೆಯಾಗಿದೆ 264 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,14,901ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ನಾಲ್ವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,004 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,609 ಸಕ್ರಿಯ ಪ್ರಕರಣಗಳಿವೆ.
PublicNext
02/09/2021 07:13 pm