ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 45,352 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 45,352 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 366 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,39,895 ಕ್ಕೆ ಏರಿಕೆಯಾಗಿದೆ.
ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 45,352 ಹೊಸ #COVID ಪ್ರಕರಣಗಳು, 34,791 ಚೇತರಿಕೆಗಳು ಮತ್ತು 366 ಸಾವುಗಳು ಎಂದು ಭಾರತ ವರದಿ ಮಾಡಿದೆ. ಚೇತರಿಕೆ ದರ 97.45%ನಷ್ಟಿದೆ.
PublicNext
03/09/2021 10:17 am