ಬೆಂಗಳೂರು: ರಾಜ್ಯದಲ್ಲಿ ಇಂದು 1,220 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಕೆ.ಸುಧಾಕರ್, "ಬೆಂಗಳೂರಿನಲ್ಲಿ ಇಂದು 319 ಜನರಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.68 ಕ್ಕೆ ಕುಸಿದಿದೆ. ಇಂದು ಬೆಂಗಳೂರಿನ 202 ಜನರು ಸೇರಿ ರಾಜ್ಯದಲ್ಲಿ 1,175 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ" ಎಂದು ತಿಳಿಸಿದ್ದಾರೆ.
ಇದೇ ಸಮಯದಲ್ಲಿ ಬೆಂಗಳೂರಿನ 8 ಜನರು ಸೇರಿ ರಾಜ್ಯದ 19 ಜನರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 18,404 ಸಕ್ರಿಯ ಪ್ರಕರಣಗಳಿವೆ ಹಾಗೂ ಇಂದು 1,79,227 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
PublicNext
03/09/2021 05:55 pm