ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 1,220 ಜನರಲ್ಲಿ ಸೋಂಕು ಪತ್ತೆ

ಬೆಂಗಳೂರು : ರಾಜ್ಯದಲ್ಲಿಂದು 1220 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2953064ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 179227ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ 0.68 %ಕ್ಕೆ ಕುಸಿದಿದೆ.

ರಾಜ್ಯದಲ್ಲಿ ಇಂದು 1175 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2897254 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 19 ಜನ ಬಲಿಯಾಗಿದ್ದು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37380 ಕ್ಕೆ ಏರಿಕೆಯಾಗಿದೆ. 18404 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.55 % ನಷ್ಟಿದೆ.

ಬೆಂಗಳೂರು: ನಗರದಲ್ಲಿ 319 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1238834 ಕ್ಕೆ ಏರಿಕೆಯಾಗಿದೆ 202 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1215103ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 8 ಜನ ಸಾವನ್ನಪ್ಪಿದ್ದು ಈವೆರಗೂ ಒಟ್ಟು 16012 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7718 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
PublicNext

PublicNext

03/09/2021 08:07 pm

Cinque Terre

55.33 K

Cinque Terre

0