ನವದೆಹಲಿ: ಹೆಮ್ಮಾರಿ ಅಟ್ಟಹಾಸ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 42,618 ಕೋವಿಡ್–19 ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 3,29,45,907ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಮೂರು ದಿನಗಳಿಂದ ಸತತವಾಗಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಪ್ರಸ್ತುತ ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,05,681ರಷ್ಟಾಗಿದೆ. ಒಟ್ಟು ಸೋಂಕಿನ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 1.23ರಷ್ಟಿದೆ. ಗುಣಮುಖರಾಗುತ್ತಿರುವವರ ಪ್ರಮಾಣ ಶೇ 97.43ರಷ್ಟಿದೆ. ಕೋವಿಡ್ನಿಂದಾಗಿ ನಿನ್ನೆ 330 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ ಸೋಂಕಿನಿಂದ ಸತ್ತವರ ಸಂಖ್ಯೆ 4,40,225ಕ್ಕೆ ಏರಿದೆ.
ಕಳೆದ 71 ದಿನಗಳಿಂದ ಪಾಸಿಟಿವಿಟಿ ದರ ಶೇ 3ಕ್ಕಿಂತ ಕಡಿಮೆ ಇದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
PublicNext
04/09/2021 11:09 am