ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನ ಕಾಲೇಜೊಂದರಲ್ಲಿ ಕೊರೋನಾ ಸ್ಫೋಟ : 34 ವಿದ್ಯಾರ್ಥಿಗಳಿಗೆ ಅಂಟಿದ ಸೋಂಕು

ಬೆಂಗಳೂರು: ಬೆಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಕೊರೊನಾ ಸಾಂಕ್ರಾಮಿಕ ಸ್ಫೋಟವಾಗಿದ್ದು, ಒಂದೇ ಕಾಲೇಜಿನ 34 ಮಂದಿಗೆ ಸೋಂಕು ಒಕ್ಕರಿಸಿದೆ. ಬೆಂಗಳೂರು ನಗರದ ಹೊರಮಾವು ಕ್ರಿಸ್ಟಿಯನ್ ನರ್ಸಿಂಗ್ ಕಾಲೇಜಿನಲ್ಲಿ 300 ಮಂದಿ ಪೈಕಿ 34 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಕಾಲೇಜಿನ ಸುತ್ತಮುತ್ತಲಿನ ಸುಮಾರು 100 ಮೀಟರ್ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಣೆ ಮಾಡಲಾಗಿದೆ.

ಸೋಂಕು ಹಿನ್ನಲೆಯಲ್ಲಿ ನರ್ಸಿಂಗ್ ಕಾಲೇಜನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಕಾಲೇಜಿನ ಸುತ್ತ-ಮುತ್ತ ಇರುವ ಸುಮಾರು 800 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಆಗಸ್ಟ್ 27 ರಿಂದ ಸೆಪ್ಟೆಂಬರ್ 1 ರವರೆಗೆ 34 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ 34 ವಿದ್ಯಾರ್ಥಿಗಳಲ್ಲಿ 23 ಮಂದಿ ಕೇರಳದವರು ಮತ್ತು 11 ಮಂದಿ ಪಶ್ಚಿಮ ಬಂಗಾಳದವರಾಗಿದ್ದಾರೆ. 12 ಹುಡುಗರು ಮತ್ತು 22 ಹುಡುಗಿಯರಲ್ಲಿ 16 ಮಂದಿಯನ್ನು ಎಚ್ಎಎಲ್ ಕೋವಿಡ್ ಕೇರ್ ಸೆಂಟರ್ಗೆ ಮತ್ತು 18 ಇತರರನ್ನು ವಾರ್ಡ್ ಸಂಖ್ಯೆ 82 ರಲ್ಲಿರುವ ಜಿಂಕ್ ಹೋಟೆಲ್ ಸಿಸಿಸಿಗೆ ವರ್ಗಾಯಿಸಲಾಗಿದೆ.

ಶುಕ್ರವಾರ ಕಾಲೇಜಿಗೆ ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು, 'ಹೊರ ರಾಜ್ಯದಿಂದ ವಿದ್ಯಾರ್ಥಿಗಳು ಬರುವುದರಿಂದ ಶಿಕ್ಷಣ ಸಂಸ್ಥೆಗಳು ಎಚ್ಚರ ವಹಿಸಬೇಕು. ಹೊರಮಾವು ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಕೇರಳ ಮತ್ತು ಪಶ್ಚಿಮ ಬಂಗಾಳದಿಂದ ಬಂದವರಾಗಿದ್ದಾರೆ. ಕೋವಿಡ್ ದೃಢಪಟ್ಟವರಲ್ಲಿ ಬಹುತೇಕರು ಕೊರೊನಾ ಸೋಂಕು ಲಕ್ಷಣರಹಿತರಾಗಿದ್ದಾರೆ. ಇವರ ಮಾದರಿಯನ್ನು ವೈರಾಣು ಅನುಕ್ರಮಣಿಕೆಗೆ ಕಳುಹಿಸಲಾಗುವುದು ಎಂದರು.

Edited By : Nirmala Aralikatti
PublicNext

PublicNext

04/09/2021 12:49 pm

Cinque Terre

45.52 K

Cinque Terre

4