ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸಾವಿರದ ಗಡಿ ದಾಟಿದ್ದ ಸೋಂಕಿತರ ಸಂಖ್ಯೆ ಇಂದು ತಗ್ಗಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 983 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,54,047 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.61ಕ್ಕೆ ಕುಸಿದಿದೆ. ಇಂದು 1,59,248 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,620 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 28,98,874 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 21 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,401ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 17,746 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.13ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 289 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,39,123ಕ್ಕೆ ಏರಿಕೆಯಾಗಿದೆ 618 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,15,721ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 7 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,019 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,382 ಸಕ್ರಿಯ ಪ್ರಕರಣಗಳಿವೆ.
PublicNext
04/09/2021 07:15 pm