ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿತ್ತೂರು ಶಾಸಕ ದಂಪತಿ ಮೇಲೆ ಪುಷ್ಪವೃಷ್ಟಿ- ಪೊಲೀಸರಿಗೆ ಶೋಕಾಸ್ ನೋಟಿಸ್

ಬೆಳಗಾವಿ: ಕಿತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಹಾಂತೇಶ ದೊಡ್ಡಗೌಡರ ದಂಪತಿ ಮೇಲೆ ಪೊಲೀಸರು ಪುಷ್ಪವೃಷ್ಟಿ ಮಾಡಿದ್ದು ಭಾರೀ ಟೀಕೆಗೆ ಕಾರಣವಾಗಿದೆ. ಇದರಿಂದಾಗಿ ಎಚ್ಚೆತ್ತ ಬೆಳಗಾವಿ ಎಸ್‌ಪಿ ಲಕ್ಷ್ಮಣ ನಿಂಬರಗಿ ಅವರು ಶಾಸಕ ಮಹಾಂತೇಶ್ ದೊಡ್ಡಗೌಡರ್ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿಗಳಿಗೆ ನೊಟೀಸ್ ಜಾರಿಗೊಳಿಸಿದ್ದಾರೆ.

ಶಾಸಕ ಮಹಾಂತೇಶ್ ದೊಡ್ಡಗೌಡರ್ ಮತ್ತು ಅವರ ಪತ್ನಿ ಮಂಜುಳಾ ಅವರನ್ನು ಕುರಿಸಿ ಬೈಲಹೊಂಗಲ ಡಿಎಸ್‌ಪಿ ಶಿವಾನಂದ ಕಟಗಿ, ಸಿಪಿಐ ಸಾತೇನಹಳ್ಳಿ, ನೇಸರಗಿ ಪೊಲೀಸ್ ಠಾಣೆ ಪಿಎಸ್ಐ ಶೀಗಿಹಳ್ಳಿ, ಎಸ್‌ಐ ವಿಶ್ವನಾಥ್ ಮಲ್ಲನ್ನವರ್, ಪೇದೆಗಳು ಮತ್ತು ಚಾಲಕರು ಹೂವಿನ ಮಳೆ ಸುರಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಟೀಕೆಗೊಳಗಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಪಿ ಲಕ್ಷ್ಮಣ ನಿಂಬರಗಿ, "ವಿಡಿಯೊ ಗಮನಿಸಿದ್ದೇನೆ. ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬೈಲಹೊಂಗಲ ಡಿಎಸ್‌ಪಿ ಶಿವಾನಂದ ಕಟಗಿ, ಸಿಪಿಐ ಯು.ಎಚ್‌. ಸಾತೇನಹಳ್ಳಿ, ನೇಸರಗಿ ಠಾಣೆ ಪಿಎಸ್‌ಐ ವೈ.ಎಲ್. ಶೀಗಿಹಳ್ಳಿ ಹಾಗೂ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ" ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

04/09/2021 07:42 pm

Cinque Terre

159.4 K

Cinque Terre

15

ಸಂಬಂಧಿತ ಸುದ್ದಿ