ಬೆಂಗಳೂರು: ರಾಜ್ಯದಲ್ಲಿ ನಿನ್ನೆ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ ಇಂದು ಮತ್ತೆ ಸಾವಿರದ ಗಡಿ ದಾಟಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 1,117 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,55,164 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.71ಕ್ಕೆ ಕುಸಿದಿದೆ. ಇಂದು 1,56,902 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,354 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,00,228 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 8 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,409ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 17,501 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.71ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 358 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,39,481ಕ್ಕೆ ಏರಿಕೆಯಾಗಿದೆ 530 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,16,251ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಐವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,024 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,205 ಸಕ್ರಿಯ ಪ್ರಕರಣಗಳಿವೆ.
PublicNext
05/09/2021 06:45 pm