ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 31,222 ಕೊರೊನಾ ಕೇಸ್‌ಗಳು ಪತ್ತೆಯಾಗಿದ್ದು, 42,942 ಮಂದಿ ಗುಣಮುಖರಾಗಿದ್ದಾರೆ. ಗುಣಮುಖ ಪ್ರಮಾಣ ಶೇ 97.48ರಷ್ಟಿರುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ದೇಶದಲ್ಲಿ ಸದ್ಯ 3,92,864 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ. ವಾರದಲ್ಲಿ ಕೋವಿಡ್ ದೃಢ ಪ್ರಮಾಣ ಶೇ 2.56ರಷ್ಟಿದೆ ಹಾಗೂ ಕಳೆದ 74 ದಿನಗಳಲ್ಲಿ ಶೇ 3ಕ್ಕಿಂತಲೂ ಕಡಿಮೆ ದಾಖಲಾಗಿದೆ. ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,30,58,843ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3,22,24,937 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ 4,41,042 ಮಂದಿ ಮೃತಪಟ್ಟಿದ್ದಾರೆ.
24 ಗಂಟೆಗಳಲ್ಲಿ ಕೋವಿಡ್ ಕಾರಣಗಳಿಂದಾಗಿ 290 ಮಂದಿ ಸಾವಿಗೀಡಾಗಿದ್ದಾರೆ. ದೇಶದಾದ್ಯಂತ ಈವರೆಗೂ 69,90,62,776 ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ.
PublicNext
07/09/2021 11:37 am