ಬೆಂಗಳೂರು: ರಾಜ್ಯದ ಜನತೆಗೆ ಸಮಾಧಾನದ ಸುದ್ದಿ ಎಂದರೆ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಕೇವಲ 851 ಜನರಲ್ಲಿ ಸೋಂಕು ತಗುಲಿದೆ. ಇದೇ ಡೆಡ್ಲಿ ಸೋಂಕಿಗೆ 15 ಜನ ಸೋಂಕಿತರು ಮೃತಪಟ್ಟಿದ್ದಾರೆ. 790 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.71 ರಷ್ಟಿದೆ. ಇಂದು 1,18,791 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ 17,432 ಸಕ್ರಿಯ ಪ್ರಕರಣಗಳಿವೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 248 ಜನರಿಗೆ ಸೋಂಕು ತಗುಲಿದ್ದು, 3 ಸೋಂಕಿತರು ಮೃತಪಟ್ಟಿದ್ದಾರೆ. 362 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 7,063 ಸಕ್ರಿಯ ಪ್ರಕರಣಗಳಿವೆ.
PublicNext
07/09/2021 06:58 pm