ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿಂತಿಲ್ಲ ಕೊರೊನಾ ಎಚ್ಚರ ಇರೋಣ: ಇಂದು 851 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಅಬ್ಬರ ಸಾವಿರ ದಾಟುವ ಮುನ್ಸೂಚನೆ ಕೊಟ್ಟಿದೆ. ಕಳೆದ 24 ಗಂಟೆಯಲ್ಲಿ 851 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 15 ಜನ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,56,988 ಜನರಿಗೆ ಸೋಂಕು ತಗುಲಿದ್ದು, 37,441 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 790 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,02,089 ಕ್ಕೆ ಏರಿಕೆಯಾಗಿದೆ. ಇನ್ನು 17,432 ಸಕ್ರಿಯ ಪ್ರಕರಣಗಳಿವೆ. ಹಾಗೂ ರಾಜ್ಯಾದ್ಯಂತ ಕೋವಿಡ್ ಖಚಿತತೆಯ ಪ್ರಮಾಣ 0.71% ನಷ್ಟಿದೆ. ಮತ್ತು ಮರಣ ಪ್ರಮಾಣ 1.76%ನಷ್ಟಿದೆ. ಇನ್ನು ರಾಜ್ಯಾದ್ಯಂತ 1,18,791 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದೆ. ಇಂದು 248 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,39,972 ಕ್ಕೆ ಏರಿಕೆಯಾಗಿದೆ. 362 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,16,873ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಮೂವರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16,035 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,063 ಸಕ್ರಿಯ ಪ್ರಕರಣಗಳಿವೆ.

Edited By : Nagaraj Tulugeri
PublicNext

PublicNext

07/09/2021 07:28 pm

Cinque Terre

38.84 K

Cinque Terre

2

ಸಂಬಂಧಿತ ಸುದ್ದಿ