ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ಮತ್ತೆ ಹೆಚ್ಚಾಗುವ ಲಕ್ಷಣ: ಇಂದು 1,102 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಅಲೆ ಇನ್ನೂ ಜೀವಂತ ಇದೆ ಎಂಬುದು ಮತ್ತೆ ಸಾಬೀತಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1102 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 17 ಜನ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 29,58,090 ಜನರಿಗೆ ಸೋಂಕು ತಗುಲಿದ್ದು 37,458 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,458 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,03,547 ಕ್ಕೆ ಏರಿಕೆಯಾಗಿದೆ. ಇನ್ನು 17,058 ಸಕ್ರಿಯ ಪ್ರಕರಣಗಳಿವೆ. ಇನ್ನು ರಾಜ್ಯದಲ್ಲಿ ಕೋವಿಡ್ ಸಕಾರಾತ್ಮಕತೆಯ ದರ 0.64%ನಷ್ಟಿದೆ. ಹಾಗೂ ಮರಣ ಪ್ರಮಾಣ 1.54%ನಷ್ಟಿದೆ. ಇನ್ನು ರಾಜ್ಯದಾದ್ಯಂತ 1,69,621 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 338 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,40,310 ಕ್ಕೆ ಏರಿಕೆಯಾಗಿದೆ. 277 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,17,150ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಐವರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16,040 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,119 ಸಕ್ರಿಯ ಪ್ರಕರಣಗಳಿವೆ.

Edited By : Nagaraj Tulugeri
PublicNext

PublicNext

08/09/2021 07:14 pm

Cinque Terre

173.1 K

Cinque Terre

4