ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 43,263 ಕೊರೊನಾ ಕೇಸ್‌ಗಳು ಪತ್ತೆಯಾಗಿದ್ದು, 40,567 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,31,39,981ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3,23,04,618 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ 4,41,749 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸದ್ಯ 3,93,614 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ.
24 ಗಂಟೆಗಳಲ್ಲಿ ಕೋವಿಡ್ ಕಾರಣಗಳಿಂದಾಗಿ 338 ಮಂದಿ ಸಾವಿಗೀಡಾಗಿದ್ದಾರೆ. ದೇಶದಾದ್ಯಂತ ಈವರೆಗೂ 71,65,97,428 ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ.
PublicNext
09/09/2021 10:24 am