ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಇತ್ತೀಚಿನ ದಿನಗಳಲ್ಲಿ ಮತ್ತೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 1,074 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ 4 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ,ರಾಜ್ಯದಲ್ಲಿ ಈವರೆಗೂ 29,59,164 ಜನರಿಗೆ ಸೋಂಕು ತಗುಲಿದ್ದು, 37,462 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,136 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,04,683 ಕ್ಕೆ ಏರಿಕೆಯಾಗಿದೆ. ಇನ್ನು 16,992 ಸಕ್ರಿಯ ಪ್ರಕರಣಗಳಿವೆ. ಹಾಗೂ ರಾಜ್ಯಾದ್ಯಂತ ಕೋವಿಡ್ ಸಕಾರಾತ್ಮಕತೆ ದರ 0.63% ನಷ್ಟಿದೆ. ಹಾಗೂ ಮರಣ ಪ್ರಮಾಣ 0.37% ನಷ್ಟಿದೆ. ಇದರೊಂದಿಗೆ 1,69,448 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದೆ. ಇಂದು 343 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,40,653ಕ್ಕೆ ಏರಿಕೆಯಾಗಿದೆ. 251 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,17,401 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಮೂವರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೆ ಒಟ್ಟು 16,043 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,208 ಸಕ್ರಿಯ ಪ್ರಕರಣಗಳಿವೆ.
PublicNext
09/09/2021 06:30 pm