ನವದೆಹಲಿ: ಹೆಮ್ಮಾರಿ ಸೋಂಕಿನಿಂದ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 260 ಜನ ಅಸುನೀಗಿದ್ದಾರೆ. ಇದೇ ವೇಳೆ 34,973 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,31,74,954ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿಗೆ ಬಲಿಯಾದವರ ಸಂಖ್ಯೆ 4,42,009ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳ ಅವದಿಯಲ್ಲಿ ದೇಶದಲ್ಲಿ 37,681 ಮಂದಿ ಸೋಂಕಿತರು ಗುಣಮುಖರಾಗಿದ್ದು ಆ ಮೂಲಕ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 3,23,42,299ಕ್ಕೆ ಏರಿಕೆಯಾದಂತಾಗಿದೆ. ಪ್ರಸ್ತುತ 3,90,646 ಸಕ್ರಿಯ ಪ್ರಕರಣಗಳಿವೆ.ಈ ವರೆಗೂ ದೇಶಾದ್ಯಂತ 72,37,84,586 ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ. ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
PublicNext
10/09/2021 10:41 am