ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ತನ್ನ ಇರುವಿಕೆಯನ್ನು ತೋರ್ಪಡಿಸುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 967 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ 10 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ,ರಾಜ್ಯದಲ್ಲಿ ಈವರೆಗೂ 29,60,131 ಜನರಿಗೆ ಸೋಂಕು ತಗುಲಿದ್ದು, 37,472 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 921 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,05,604 ಕ್ಕೆ ಏರಿಕೆಯಾಗಿದೆ. ಇನ್ನು 17,028 ಸಕ್ರಿಯ ಪ್ರಕರಣಗಳಿವೆ. ಹಾಗೂ ಕೋವಿಡ್ ಸಕಾರಾತ್ಮಕತೆ ಪ್ರಮಾಣ 0.57%ನಷ್ಟಿದೆ. ಮತ್ತು ಮರಣ ಪ್ರಮಾಣ 1.03% ನಷ್ಟಿದೆ. ರಾಜ್ಯಾದ್ಯಂತ 1,67,679 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು ಇಂದು 310 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,40,963 ಕ್ಕೆ ಏರಿಕೆಯಾಗಿದೆ. 207 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,17,608 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16,045 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,309 ಸಕ್ರಿಯ ಪ್ರಕರಣಗಳಿವೆ.
PublicNext
10/09/2021 06:58 pm