ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ತಗ್ಗಿದ ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಜೊತೆಗೆ ಸೋಂಕಿತರ ಸಾವಿನ ಪ್ರಮಾಣವೂ ತಗ್ಗಿದೆ.

ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 801 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,60,932 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.67ಕ್ಕೆ ಕುಸಿದಿದೆ. ಇಂದು 1,19,503 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 1,142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,06,746 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 15 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,487ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 16,672 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.87ನಷ್ಟಿದೆ.

ಬೆಂಗಳೂರು: ನಗರದಲ್ಲಿ ಇಂದು 207 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,41,170ಕ್ಕೆ ಏರಿಕೆಯಾಗಿದೆ 285 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,17,893ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಇಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,047 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,229 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
PublicNext

PublicNext

11/09/2021 06:54 pm

Cinque Terre

92.73 K

Cinque Terre

2