ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ನಿಧಾನವಾಗಿ ಇಳಿಕೆ ಕಾಣುತ್ತಿದೆ. 19 ದಿನಗಳ ಬಳಿಕ ಇಂದು 30 ಸಾವಿರಕ್ಕಿಂತ ಕಡಿಮೆ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, ದೇಶದಾದ್ಯಂತ 24 ಗಂಟೆಗಳಲ್ಲಿ 28,591 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. 34,848 ಜನರು ಕೊರೊನಾದಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 338 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,32,36,921ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಇದುವರೆಗೂ 3,24,09,345 ಮಂದಿ ಚೇತರಿಸಿಕೊಂಡಿದ್ದಾರೆ. 4,42,655 ಮಂದಿ ಸಾವಿಗೀಡಾಗಿದ್ದು, ಸದ್ಯ 3,84,921 ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಈವರೆಗೆ 73,82,07,378 ಡೋಸ್ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
PublicNext
12/09/2021 11:27 am