ಬೆಂಗಳೂರು: ಕೊರೊನಾ ಎರಡನೇ ಅಲೆ ಬಂದು ಜನರ ಜನ್ಮ ಜಾಲಾಡಿದೆ. ಸಾವಿರಾರು ಜನರ ಪ್ರಾಣ ತೆಗೆದುಕೊಂಡಿದೆ. ಬರುವ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಕೋವಿಡ್ ಮೂರನೇ ಪ್ರಭಾವ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಅಕ್ಟೋಬರ್- ನವೆಂಬರ್ ತಿಂಗಳಲ್ಲಿ ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ.ಹೀಗಾಗಿ ಕರ್ನಾಟಕದಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ತಜ್ಞರ ಸಮಿತಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. ಸೆಪ್ಟೆಂಬರ್ ತಿಂಗಳಿನಿಂದ ಸಾಲು-ಸಾಲು ಹಬ್ಬಗಳು ಇರುವುದರಿಂದ ಕೊರೊನಾ ಮಾರ್ಗಸೂಚಿಗಳನ್ನು ಕಠಿಣಗೊಳಿಸದಿದ್ದರೆ ಅಕ್ಟೋಬರ್ ತಿಂಗಳ ವೇಳೆಗೆ ಕೊರೊನಾ ಕೇಸುಗಳು ಮತ್ತೆ ಹೆಚ್ಚಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ ಎನ್ನಲಾಗಿದೆ.
ಇನ್ನು ಕೊರೊನಾ 3 ನೇ ಅಲೆ ಮಕ್ಕಳ ಮೇಲೆ ಅತಿ ಹೆಚ್ಚು ಪರಿಣಾಮ ಬೀರುವ ಸಾಧ್ಯತೆ ಇದ್ದು, ಹಬ್ಬದ ನೆಪದಲ್ಲಿ ಜನರು ಮತ್ತೆ ಕೊರೊನಾ ನಿಯಮಗಳನ್ನು ಪಾಲಿಸದಿದ್ದರೆ ಕೊರೊನಾ3 ನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ ಎನ್ನಲಾಗಿದೆ.
PublicNext
13/09/2021 09:02 am