ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 25,404 ಕೋವಿಡ್ ಪ್ರಕರಣಗಳು ಪತ್ತೆ

ನವದೆಹಲಿ : ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 25,404 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ವೇಳೆ ಹೆಮ್ಮಾರಿ ಸೋಂಕಿಗೆ 339 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 32 ಲಕ್ಷದ 89 ಸಾವಿರದ 579ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4 ಲಕ್ಷದ 43 ಸಾವಿರದ 213ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 3 ಲಕ್ಷದ 62 ಸಾವಿರದ 207 ಆಗಿದೆ.ಈ ನಡುವೆ ಕಳೆದ 24 ಗಂಟೆಗಳಲ್ಲಿ 37 ಸಾವಿರದ 127 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3 ಕೋಟಿಯ 24 ಲಕ್ಷದ 84 ಸಾವಿರದ 159ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಇದುವರೆಗೆ 54 ಕೋಟಿಯ 44 ಲಕ್ಷ ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Edited By : Nirmala Aralikatti
PublicNext

PublicNext

14/09/2021 02:08 pm

Cinque Terre

27.66 K

Cinque Terre

0