ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆ ಕಾಣುತ್ತಿದೆ. ಇದರೊಂದಿಗೆ ಸೋಂಕಿತರ ಸಾವಿನ ಪ್ರಮಾಣವೂ ತಗ್ಗಿದ್ದು, ರಾಜ್ಯದಲ್ಲಿ ಕೊರೊನಾ ಆತಂಕ ಕಡಿಮೆಯಾಗುತ್ತಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 559 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,62,967 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.52ಕ್ಕೆ ಕುಸಿದಿದೆ. ಇಂದು 1,05,645 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,034 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,09,656 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 12 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,529ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 15,754 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.14ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 231 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,41,870ಕ್ಕೆ ಏರಿಕೆಯಾಗಿದೆ 302 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,18,673ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ನಾಲ್ವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,060 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,136 ಸಕ್ರಿಯ ಪ್ರಕರಣಗಳಿವೆ.
PublicNext
14/09/2021 06:25 pm