ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆ ಕಾಣುತ್ತಿದೆ. ಆದರೆ ಇಂದು ಮತ್ತೆ ಶತಕದ ಗಡಿ ದಾಟಿದ್ದರೂ ಬಾಗಲಕೋಟೆ, ಬೀದರ್, ಗದಗ, ರಾಯಚೂರು, ರಾಮನಗರ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಒಂದೇ ಒಂದು ಕೊರೊನಾ ಕೇಸ್ ಪತ್ತೆಯಾಗಿಲ್ಲ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 1,116 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,64,083 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.65ಕ್ಕೆ ಕುಸಿದಿದೆ. ಇಂದು 1,70,306 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 970 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,10,626 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 8 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,537ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 15,892 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.71ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 462 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,42,332ಕ್ಕೆ ಏರಿಕೆಯಾಗಿದೆ 265 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,18,938ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಐವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,065 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,328 ಸಕ್ರಿಯ ಪ್ರಕರಣಗಳಿವೆ.
PublicNext
15/09/2021 07:26 pm