ಬೆಂಗಳೂರು: ರಾಜ್ಯದಲ್ಲಿ ಇಂದು 1,108 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಕೆ.ಸುಧಾಕರ್, "ಬೆಂಗಳೂರಿನಲ್ಲಿ ಇಂದು 308 ಜನರಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.66ಕ್ಕೆ ಕುಸಿದಿದೆ. ಇಂದು ಬೆಂಗಳೂರಿನ 203 ಜನರು ಸೇರಿ ರಾಜ್ಯದಲ್ಲಿ 809 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ" ಎಂದು ತಿಳಿಸಿದ್ದಾರೆ.
ಇದೇ ಸಮಯದಲ್ಲಿ ಬೆಂಗಳೂರಿನ ಐವರು ಸೇರಿ ರಾಜ್ಯದ 18 ಜನರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 16,174 ಸಕ್ರಿಯ ಪ್ರಕರಣಗಳಿವೆ ಹಾಗೂ ಇಂದು 1,66,006 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
PublicNext
16/09/2021 05:56 pm