ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮತ್ತೆ ಕೊರೊನಾ ಏರಿಕೆ- 1,108 ಜನರಿಗೆ ಸೋಂಕು ದೃಢ, 18 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿತ್ತು. ಆದರೆ ನಿನ್ನೆಯಿಂದ ಸೋಂಕಿತರ ಸಂಖ್ಯೆ ಮತ್ತೆ ಸಾವಿರದ ಗಡಿ ದಾಟಿದೆ. ನಿನ್ನೆ (ಬುಧವಾರ) 1,116 ಜನರಿಗೆ ಕೊರೊನಾ ದೃಢಪಟ್ಟಿತ್ತು.

ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 1,108 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,65,191 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.66ಕ್ಕೆ ಕುಸಿದಿದೆ. ಇಂದು 1,66,006 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 809 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,11.434 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 18 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,555ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 16,174 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.62ನಷ್ಟಿದೆ.

ಬೆಂಗಳೂರು: ನಗರದಲ್ಲಿ ಇಂದು 308 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,42,640ಕ್ಕೆ ಏರಿಕೆಯಾಗಿದೆ 203 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,19,141ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಐವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,070 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,428 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
PublicNext

PublicNext

16/09/2021 07:07 pm

Cinque Terre

101.21 K

Cinque Terre

2