ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟುಹಬ್ಬದ ಅಂಗವಾಗಿ ದೇಶಾದ್ಯಂತ ಇಂದು ವಿಶೇಷ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದೆ. ಇಂದು ಸಂಜೆ 5 ಗಂಟೆಯವರೆಗೆ ದಾಖಲೆಯ 2 ಕೋಟಿ ಲಸಿಕೆ ಡೋಸ್ ಹಾಕಲಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಮಧ್ಯಾಹ್ನ 1 ಗಂಟೆಯವರೆಗೆ 1 ಕೋಟಿಗೂ ಅಧಿಕ ಕೋವಿಡ್ ವ್ಯಾಕ್ಸಿನೇಷನ್ ಹಾಕಲಾಗಿತ್ತು. ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ 1.5 ಕೋಟಿ ಡೋಸ್ ವ್ಯಾಕ್ಸಿನ್ ನೀಡಲಾಗಿತ್ತು. ಇನ್ನು 2 ಕೋಟಿ ಕೋವಿಡ್ ವ್ಯಾಕ್ಸಿನೇಷನ್ ಡೋಸ್ ಲಸಿಕೆ ನೀಡುತ್ತಿದ್ದಂತೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಸಿಹಿ ವಿತರಣೆ ಮಾಡಿ ಕೇಂದ್ರ ಆರೋಗ್ಯ ಸಚಿವರು ಸಂಭ್ರಮಾಚರಣೆ ಮಾಡಿದರು.
ಈ ಹಿಂದೆ ಆಗಸ್ಟ್ 31ರಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ದೇಶಾದ್ಯಂತ 1.30 ಕೋಟಿ ಕೋವಿಡ್ ವ್ಯಾಕ್ಸಿನೇಷನ್ ಹಾಕಲಾಗಿತ್ತು.
PublicNext
17/09/2021 06:18 pm