ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿತ್ತು. ಆದರೆ ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆ ಮತ್ತೆ ಸಾವಿರದ ಗಡಿ ದಾಟಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 1,003 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,66,194 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.67ಕ್ಕೆ ಕುಸಿದಿದೆ. ಇಂದು 1,48,496 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,199 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,12,633 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 18 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,573ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 15,960 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.79ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 310 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,42,950ಕ್ಕೆ ಏರಿಕೆಯಾಗಿದೆ 276 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,19,417ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಆರು ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,076 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,456 ಸಕ್ರಿಯ ಪ್ರಕರಣಗಳಿವೆ.
PublicNext
17/09/2021 06:26 pm