ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 889 ಜನರಲ್ಲಿ ಸೋಂಕು ಪತ್ತೆ

ಬೆಂಗಳೂರು : ರಾಜ್ಯದಲ್ಲಿಂದು 889 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2967083 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 138920 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ 0.63% ಕ್ಕೆ ಕುಸಿದಿದೆ.

ರಾಜ್ಯದಲ್ಲಿ ಇಂದು 1080 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2913713 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 14 ಜನ ಬಲಿಯಾಗಿದ್ದು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37587 ಕ್ಕೆ ಏರಿಕೆಯಾಗಿದೆ. 15755 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.57% ನಷ್ಟಿದೆ.

ಬೆಂಗಳೂರು: ನಗರದಲ್ಲಿ 263 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1243213 ಕ್ಕೆ ಏರಿಕೆಯಾಗಿದೆ. 222 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1219639 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 06 ಜನ ಸಾವನ್ನಪ್ಪಿದ್ದು ಈವೆರಗೂ ಒಟ್ಟು 16082 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7491 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
PublicNext

PublicNext

18/09/2021 06:46 pm

Cinque Terre

55.72 K

Cinque Terre

1