ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಸಾವಿರ ಗಡಿ ದಾಟಿತ್ತು. ಆದರೆ ನಿನ್ನೆ 889 ಜನರಿಗೆ ಸೋಂಕು ದೃಢಪಟ್ಟಿದ್ದರೆ, ಇಂದು ಮತ್ತಷ್ಟು ಇಳಿಕೆ ಕಂಡಿದೆ
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 783 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,67,866 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.60ಕ್ಕೆ ಕುಸಿದಿದೆ. ಇಂದು 1,29,874 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,139 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,14,852 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 16 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,603ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 15,383 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.04ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 267 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,43,480ಕ್ಕೆ ಏರಿಕೆಯಾಗಿದೆ 277 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,19,916ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 7 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,089 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,474 ಸಕ್ರಿಯ ಪ್ರಕರಣಗಳಿವೆ.
PublicNext
19/09/2021 07:35 pm