ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ರಾಜ್ಯದಲ್ಲಿ 818 ಜನರಿಗೆ ಕೊರೊನಾ ಸೋಂಕು: ಎಚ್ಚರವಾಗಿರಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ತನ್ನ ಇರುವಿಕೆಯನ್ನು ತೋರ್ಪಡಿಸುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 818 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದಾರೆ. ಹಾಗೂ 21 ಜನ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,69,361 ಜನರಿಗೆ ಸೋಂಕು ತಗುಲಿದ್ದು, 37,648 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,414 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,17,944 ಕ್ಕೆ ಏರಿಕೆಯಾಗಿದೆ. ಇನ್ನು 13,741 ಸಕ್ರಿಯ ಪ್ರಕರಣಗಳಿವೆ. ಹಾಗೂ ಕೋವಿಡ್ ಖಚಿತತೆಯ ಪ್ರಮಾಣ 0.80% ನಷ್ಟಿದೆ. ಹಾಗೂ ಮರಣ ಪ್ರಮಾಣ 2.56%ನಷ್ಟಿದೆ. ರಾಜ್ಯದಾದ್ಯಂತ ಒಟ್ಟು 10,1,549 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಹರಡುವಿಕೆ ಭೀತಿ ಈಗಲೂ ಇದೆ. ಇಂದು 359 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,44,052ಕ್ಕೆ ಏರಿಕೆಯಾಗಿದೆ. 381ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,20,659ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 8 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16,104 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,288 ಸಕ್ರಿಯ ಪ್ರಕರಣಗಳಿವೆ.

Edited By : Nagaraj Tulugeri
PublicNext

PublicNext

21/09/2021 06:55 pm

Cinque Terre

76.62 K

Cinque Terre

4

ಸಂಬಂಧಿತ ಸುದ್ದಿ