ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ಇನ್ನು ಕಡಿಮೆಯಾಗಿಲ್ಲ. ಕಳೆದ 24 ಗಂಟೆಯಲ್ಲಿ 847 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 20 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,70,208 ಜನರಿಗೆ ಸೋಂಕು ತಗುಲಿದ್ದು, 37,668 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 946 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,18,890ಕ್ಕೆ ಏರಿಕೆಯಾಗಿದೆ. ಇನ್ನು 13,621 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಯಲ್ಲಿ ಕೋವಿಡ್ ಖಚಿತತೆಯ ಪ್ರಮಾಣ 0.57%ನಷ್ಟಿದೆ. ಹಾಗೂ ಮರಣ ಪ್ರಮಾಣ 2.36%ನಷ್ಟಿದೆ. ಇನ್ನು ರಾಜ್ಯದಾದ್ಯಂತ 14,6,772 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು ಇಂದು 312 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,44,364 ಕ್ಕೆ ಏರಿಕೆಯಾಗಿದೆ. 219 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,20,878ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 6 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16,110 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,375 ಸಕ್ರಿಯ ಪ್ರಕರಣಗಳಿವೆ.
PublicNext
22/09/2021 07:31 pm